
ಹಾವೇರಿ: ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ಹರಿದ ರೋಡ್ ರೋಲರ್‌ನಿಂದ ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ, ಊಟದ ನಂತರ ನಿದ್ರೆ ಜಾರಿದ್ದರು.ಈ ವೇಳೆ ಏಕಾಏಕಿ ರೋಡ್ ರೂಲರ್ ಮೈ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.ಸ್ಥಳಕ್ಕೆ ಬ್ಯಾಡಗಿ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತರಿಗೆ ಸಂತಾಪ ವ್ಯಕ್ತಪಡಿಸಿದರು.



