
ಹಾವೇರಿ: ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೃದ್ಧೆಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಸತ್ತಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿರಗಂಬಿ ಗ್ರಾಮ ಪಂಚಾಯಿತಿಯಿಂದ ನಡೆಯುತ್ತಿದ್ದ ಉದ್ಯೋಗ ಖಾತ್ರಿ ಯೋಜನೆ ಕೆಲಸದಲ್ಲಿ ರೇಣುಕಮ್ಮ ನಿಂಗಪ್ಪ ಕುರುಬರ ಮೃತ ವೃದ್ದೆ (63) ಕೂಲಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದರು. ಇನ್ನೂ ಮೃತ ಪಟ್ಟ ವೃದ್ಧೆಯ ವಿಷಯ ತಿಳಿದು ಶಾಸಕ ಯು.ಬಿ.ಬಣಕಾರ ಅವರು ಸ್ಥಳಕ್ಕೆ ಭೇಟಿ ನೀಡಿ ಕಂಬನಿ ಮಿಡಿಯುವ ಜೊತೆಗೆ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಸ್ಥಳಕ್ಕೆ ರಟ್ಟೀಹಳ್ಳಿ ತಾಲೂಕು ಪಂಚಾಯಿತಿ ಅಧಿಕಾರಿಗಳು, ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು,ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



