LatestNationalNewsVideo

ಆಸ್ಕರ್ ಅಂಗಳದಲ್ಲಿ ಮಿಂಚಲು ಸಜ್ಜಾದ ‘ಕಾಂತಾರ: ಚಾಪ್ಟರ್ 1’ ಮತ್ತು ‘ಮಹಾವತಾರ್ ನರಸಿಂಹ’

ಭಾರತೀಯ ಚಿತ್ರರಂಗದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಲು ಹೊಂಬಾಳೆ ಫಿಲ್ಮ್ಸ್ ಸಜ್ಜಾಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಮತ್ತು ಆನಿಮೇಷನ್ ವಿಭಾಗದಲ್ಲಿ ‘ಮಹಾವತಾರ್ ನರಸಿಂಹ’ ಚಿತ್ರಗಳು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯ ‘ಜನರಲ್ ಎಂಟ್ರಿ’ ಪಟ್ಟಿಯಲ್ಲಿ (General Entry List) ಅಧಿಕೃತವಾಗಿ ಸ್ಥಾನ ಪಡೆದುಕೊಂಡಿವೆ.

ಒಟ್ಟು 5 ಭಾರತೀಯ ಸಿನಿಮಾಗಳು ಈ ಬಾರಿಯ ಆಸ್ಕರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅದರಲ್ಲಿ ಎರಡು ಸಿನಿಮಾಗಳು ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನದ್ದೇ ಆಗಿರುವುದು ವಿಶೇಷ ಹಾಗೂ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿಂದೆ ತೆರೆಕಂಡು ವಿಶ್ವದಾದ್ಯಂತ ಸದ್ದು ಮಾಡಿದ್ದ ‘ಕಾಂತಾರ’ದ ಯಶಸ್ಸಿನ ಬೆನ್ನಲ್ಲೇ, ಈಗ ಅದರ ಮುಂದುವರಿದ ಭಾಗವಾದ (Prequel) ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್‌ಗೆ ಇಳಿದಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಜಯರಾಮ್ ಮತ್ತು ಗುಲ್ಶನ್ ದೇವಯ್ಯ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಭಾರತದ ಸಾಕ್ಷ್ಯಚಿತ್ರಗಳು ಮತ್ತು ಕಿರುಚಿತ್ರಗಳು ಈ ಹಿಂದೆ ಆಸ್ಕರ್ ಗೆದ್ದಿದ್ದರೂ, ಫೀಚರ್ ಫಿಲ್ಮ್ (Feature Film) ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವುದು ಭಾರತೀಯ ನಿರ್ಮಾಪಕರ ಕನಸಾಗಿಯೇ ಉಳಿದಿದೆ. ಈ ಹಿಂದೆ ‘ಆರ್‌ಆರ್‌ಆರ್‌’ ಚಿತ್ರದ ‘ನಾಟು ನಾಟು’ ಹಾಡು ಆಸ್ಕರ್ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಹಾಲಿವುಡ್ ಸಿನಿಮಾಗಳ ಜೊತೆ ಪೈಪೋಟಿ ನಡೆಸಿ, ಅಂತಿಮ ನಾಮಿನೇಷನ್ ಪಟ್ಟಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಸ್ಥಾನ ಪಡೆದರೆ, ಅದು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ಕ್ಷಣವಾಗಲಿದೆ.

Related Articles

Leave a Reply

Your email address will not be published. Required fields are marked *

Back to top button
Wordpress Social Share Plugin powered by Ultimatelysocial